ಸುಖಾಸುಮ್ಮನೆ ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಪ್ರತಿಪಕ್ಷಗಳು
ನವದೆಹಲಿ: ಕಾಂಗ್ರೆಸ್ ದೆಹಲಿ ಚುನಾವಣೆಯಲ್ಲಿ ಶೂನ್ಯ ಸಂಪಾದನೆಯ ಮೂಲಕ ಹ್ಯಾಟ್ರಿಕ್ ಸಾಧಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಸಂಸತ್ ಆವರಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಸುಖಾಸುಮ್ಮನೆ ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಪ್ರತಿಪಕ್ಷಗಳು ಈ ಚುನಾವಣಾ ಫಲಿತಾಂಶದಿಂದ ಪಾಠ ಕಲಿಯಬೇಕು ಮತ್ತು ರಚನಾತ್ಮಕವಾಗಿ ಸಂಸತ್ತಿನ ಅಧಿವೇಶನಗಳಲ್ಲಿ ಭಾಗವಹಿಸುವಿಕೆಯತ್ತ ಗಮನ ಹರಿಸಬೇಕು ಎಂದರು.