Home ನಮ್ಮ ಜಿಲ್ಲೆ ಕೊಪ್ಪಳ ಶೋಕಿ ರಾಜಕಾರಣಿ ಆಗಬಾರದು

ಶೋಕಿ ರಾಜಕಾರಣಿ ಆಗಬಾರದು

0

ಕುಷ್ಟಗಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಕೃಷ್ಣಾ ಬಿ ಸ್ಕೀಮ್ ಯೋಜನೆಗೆ ಅಡಿಗಲ್ಲು ಹಾಕಿ ಕಾಮಗಾರಿ ಪ್ರಾರಂಭಿಸಲಾಗಿತ್ತು. ನಂತರ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಹಣಕಾಸು ಬಿಡುಗಡೆ ಮಾಡದೇ ಯೋಜನೆಗೆ ಹಿನ್ನಡೆಯಾಗಿತ್ತು. ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿಯ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲೂಕಿನಲ್ಲಿ ಕೆರೆ ತುಂಬಿಸುವ ಯೋಜನೆಗೆ ಶೀಘ್ರದಲ್ಲಿಯೇ ಪ್ರಾರಂಭ ಮಾಡಲಾಗುವುದು ಆಲಮಟ್ಟಿ ನದಿಯಿಂದ ಕುಷ್ಟಗಿ ಪಟ್ಟಣದ ಜನತೆಗೆ ಪರಿಶುದ್ಧವಾದ ಕುಡಿಯುವ ನೀರಿನ ಭವಣೆ ನೀಗಿಸಲು ಯೋಜನೆಯನ್ನು ತಂದವರು ಮಾಜಿ ಶಾಸಕ ಕೆ ಶರಣಪ್ಪ ಅನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.
ಆಲಮಟ್ಟಿ ನದಿಯಿಂದ ನೇರವಾಗಿ ಕುಷ್ಟಗಿ ಪಟ್ಟಣಕ್ಕೆ ನೀರು ಸರಬರಾಜು ಆಗುತ್ತಿರಲಿಲ್ಲ, ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಹುನುಗುಂದ ಮಾರ್ಗವಾಗಿ ಇಲ್ಲಕಲ್ ಮೂಲಕ ಕುಷ್ಟಗಿ ಪಟ್ಟಣಕ್ಕೆ ಆಲಮಟ್ಟಿ ನದಿಯಿಂದ ನೇರವಾಗಿ ಪ್ರತ್ಯೇಕ ಪೈಪ್ ಲೈನ್ ಅಳವಡಿಸಲಾಗಿತ್ತು. ನಂತರ ಚುನಾವಣೆ ಬಂತು ಆ ಸಂದರ್ಭದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಓಣಿ ಓಣಿ ತಿರುಗಾಡಿ ಕುಷ್ಟಗಿ ಜನತೆಯ ಬಹು ದಿನಗಳ ಬೇಡಿಕೆ ನೀರಿನ ಶಾಶ್ವತವಾಗಿ ಪರಿಹಾರ ಕಂಡಿದ್ದು ನಾನು ಎಂದು ಹೇಳಿದ್ದಾರೆ.
ಶೋಕಿ ರಾಜಕಾರಣಿ ಆಗಬಾರದು: ನನ್ನ ಅಧಿಕಾರ ಅವಧಿಯಲ್ಲಿ ಕೈಗೊಂಡಂತಹ ಕಾಮಗಾರಿಗಳನ್ನು ಶಾಸಕ ಬಯ್ಯಾಪುರ ನಾನು ಮಾಡಿದ್ದೇನೆ ಎಂದು ಹೇಳುತ್ತಾ ಹೊರಟಿದ್ದಾರೆ. ಅವರೊಬ್ಬರು ಪೋಸ್ ಕೊಡುವ ರಾಜಕಾರಣಿಯಾಗಿದ್ದಾರೆ. ಕ್ಷೇತ್ರದ ಜನತೆಗೆ ನಾವು ಏನು ಕೆಲಸ ಮಾಡಿದ್ದೇವೆ ಎನ್ನುವುದನ್ನು ತಿಳಿಸಿಕೊಡಬೇಕು ಅಂದಾಗ ಮಾತ್ರ ಪೋಸ್ ಕೊಟ್ಟಿದ್ದಕ್ಕೂ ಸಾರ್ಥಕ ಗೊಳ್ಳುತ್ತದೆ ಎಂದರು. ಪುರಸಭೆ ಅಧ್ಯಕ್ಷ ಗಂಗಾಧರಯ್ಯ ಹಿರೇಮಠ,ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು,ಮಾಜಿ ಜಿಪಂ ಸದಸ್ಯ ಕೆ.ಮಹೇಶ, ಭಾರತೀ ನಿರಗೇರಿ ಸೇರಿದಂತೆ ಅನೇಕರು ಇದ್ದರು.

ಶೋಕಿ ರಾಜಕಾರಣಿ ಆಗಬಾರದು

Exit mobile version