Home ತಾಜಾ ಸುದ್ದಿ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ರವರಿಗೆ ಅಧಿಕೃತ ಆಹ್ವಾನ

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ರವರಿಗೆ ಅಧಿಕೃತ ಆಹ್ವಾನ

0

ಶ್ರೀರಂಗಪಟ್ಟಣ: ಇದೇ ಅ.16 ರಿಂದ 18 ರ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಉದ್ಘಾಟನೆಗೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಅವರನ್ನು ಮೈಸೂರಿನ ಅವರ ನಿವಾಸದಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಆಹ್ವಾನಿಸಿ ಗೌರವ ಸಲ್ಲಿಸಿದರು.
ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆ ನಿರ್ಮಾಣ ಸೇರಿದಂತೆ ಮಂಡ್ಯ ಜಿಲ್ಲೆ ಹಾಗೂ ತಾಲ್ಲೂಕಿಗೆ ಮೈಸೂರು ಮಹಾರಾಜರ ಕೊಡುಗೆಗಳು ಅಪಾರವಾಗಿದ್ದು, ಅವರ ಕುಟುಬಸ್ಥರು ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಆಗಮಿಸುತ್ತಿರುವುದು ಸಂತೋಷದ ಸಂಗತಿ ಎಂದು ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್. ನಾಗರಾಜು, ಉಪವಿಭಾಗಾಧಿಕಾರಿ ನಂದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version