Home ತಾಜಾ ಸುದ್ದಿ ಶ್ರೀರಂಗಪಟ್ಟಣ: ಹೊತ್ತಿ ಉರಿದ ಚಲಿಸುತ್ತಿದ್ದ ಖಾಸಗಿ ಬಸ್

ಶ್ರೀರಂಗಪಟ್ಟಣ: ಹೊತ್ತಿ ಉರಿದ ಚಲಿಸುತ್ತಿದ್ದ ಖಾಸಗಿ ಬಸ್

0

ಶ್ರೀರಂಗಪಟ್ಟಣ: ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಮದುವೆ ಜನರನ್ನ ಕರೆದೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಗಣಂಗೂರು ಬಳಿಯ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು


ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡ ನಂತರ ಪ್ರಯಾಣಿಕರ ಕೋರಿಕೆಯ ಮೆರೆಗೆ ಬಸ್‌ ನಿಲ್ಲಿಸಿದ್ದಾರೆ, ಪ್ರಯಾಣಿಕರು ಬಸ್‌ನಿಂದ ಕೆಳಗೆ ಇಳಿಯುತ್ತಿದ್ದಂತೆ ಬೆಂಕಿ ಆವರಿಸಿದೆ. ಕ್ಷಣಾರ್ಧದಲ್ಲಿ ಬಸ್‌ ಸುಟ್ಟು ಕರಕಲಾಗಿದೆ, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ, ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Exit mobile version