ಶ್ರೀರಾಮನ ಪ್ರತಿಷ್ಠಾಪನೆ ಕಣ್ತುಂಬಿಕೊಳ್ಳಲು ಕಾತುರ

0
15

ಹುಬ್ಬಳ್ಳಿ: ಕೋಟ್ಯಂತರ ಹಿಂದೂಗಳ ಆಶಯದಂತೆ ಜ. ೨೨ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಡೀ ದೇಶವೇ ಸಂಭ್ರಮದಲ್ಲಿದ್ದು, ಐತಿಹಾಸಿಕ ಘಟನೆಯನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಕಂಗಳು ಕಾತುರವಾಗಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ರಾಮಮಂದಿರ ಉದ್ಘಾಟನೆಯ ಉತ್ಸಾಹ ಮುಗಿಲು ಮುಟ್ಟಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರು ಭಕ್ತಿ, ಭಾವದಿಂದ ತೊಡಗಿಸಿಕೊಳ್ಳುತ್ತಿದ್ದಾರೆ. ಇದೊಂದು ಐತಿಹಾಸಿಕ ಕ್ಷಣ. ಜ. ೨೨ರಂದು ಎಲ್ಲರ ಮನೆ, ಮನಗಳಲ್ಲೂ ಶ್ರೀರಾಮನ ಧ್ವಜ ರಾರಾಜಿಸಬೇಕು ಎಂದರು.

Previous articleಹಾವೇರಿ: ಗ್ಯಾಂಗ್ ರೇಪ್ ಬಳಿಕ ಮತ್ತೊಂದು ನೈತಿಕ ಪೊಲೀಸ್ ಗಿರಿ
Next articleಅಶೋಕ, ಬೊಮ್ಮಾಯಿ ಸೇರಿದಂತೆ ಬಿಜೆಪಿ ಮುಖಂಡರು ಪೊಲೀಸರ ವಶಕ್ಕೆ