Home ನಮ್ಮ ಜಿಲ್ಲೆ ಶ್ರೀ ಸಿದ್ಧೇಶ್ವರ ಸ್ವಾಮೀಜೀಯವರ ಆರೋಗ್ಯ ವಿಚಾರಿಸಿದ ನರೇಂದ್ರ ಮೋದಿಜಿ

ಶ್ರೀ ಸಿದ್ಧೇಶ್ವರ ಸ್ವಾಮೀಜೀಯವರ ಆರೋಗ್ಯ ವಿಚಾರಿಸಿದ ನರೇಂದ್ರ ಮೋದಿಜಿ

0

ವಿಜಯಪುರ: ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಶ್ರೀಗಳ ಜೊತೆ ಅರ್ಧಗಂಟೆಗಳ ಕಾಲ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಶೀಘ್ರ ಗುಣಮುಖರಾಗುವಂತೆ ಆಶಯ ವ್ಯಕ್ತಪಡಿಸಿದರು. ಇದೇ ವೇಳೆ ಪ್ರಹ್ಲಾದ್ ಜೋಶಿಗೆ ಕರೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಶ್ರೀಗಳ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಕರೆ ಮಾಡಿದ ವೇಳೆ ಪ್ರಧಾನಿ ಮೋದಿ ಅವರು, ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಶ್ರೀಗಳ ಪುಸ್ತಕ ಬಿಡುಗಡೆಗೊಳಿದ ಪ್ರಸಂಗವನ್ನು ನೆನಪಿಸಿಕೊಂಡು ಆರೋಗ್ಯವಾಗಿದ್ದ ಶ್ರೀಗಳ ಅನಾರೋಗ್ಯಗೊಂಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

Exit mobile version