Home ನಮ್ಮ ಜಿಲ್ಲೆ ಚಿತ್ರದುರ್ಗ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಚಿತ್ರದುರ್ಗದ ವಿಜ್ಞಾನಿ

ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಚಿತ್ರದುರ್ಗದ ವಿಜ್ಞಾನಿ

0

ಚಿತ್ರದುರ್ಗ: ಜಿಲ್ಲೆಯ ಕೂನಬೇವು ಗ್ರಾಮದ ಶಿವಾನಂದಪ್ಪ ಅವರ ಪುತ್ರ ಡಾ.ಕೆ. ಗಣೇಶ್‌ಕುಮಾರ್ ಗಣಿತಶಾಸ್ತ್ರ ವಿಭಾಗದಲ್ಲಿ ಸತತ ಐದು ಬಾರಿಗೆ (೨೦೨೦, ೨೦೨೧, ೨೦೨೨, ೨೦೨೩ & ೨೦೨೪) ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇ ರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವ ವಿದ್ಯಾಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.೨ ವಿಜ್ಞಾನಿಗಳ ಪಟ್ಟಿಯಲ್ಲಿ ೩೩೬೬೦ನೇ ಸ್ಥಾನ ಪಡೆದಿರುವುದರ ಜೊತೆಗೆ ಜೀವಮಾನದ ಶ್ರೇಷ್ಠ ಸಾಧನೆಯ ಪಟ್ಟಿಯಲ್ಲಿಯೂ ಸ್ಥಾನ ಪಡೆದಿ ದ್ದಾರೆ.
ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಲೋಕೇಶ್ ಅವರ ವಿದ್ಯಾರ್ಥಿಯಾಗಿದ್ದು, ಈ ಹಿಂದೆ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿಯೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರ ಸಾಧನೆ ಯುವಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಡಾ. ಲೋಕೇಶ್ ತಿಳಿಸಿದ್ದಾರೆ.

Exit mobile version