`ಸಚಿವೆಯ ವಿರುದ್ಧ ಅಧಿಕಾರ ದುರ್ಬಳಕೆ ದೂರು’

0
17

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಮ್ಮ ಪುತ್ರನ ಪರವಾಗಿ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಸಭೆಯೆ ಚುನಾವಣಾಧಿಕಾರಿಗಳು ಬ್ರೆಕ್ ಹಾಕಿದ್ದಾರೆ. ಅಷ್ಟೇ ಅಲ್ಲ ಸಚಿವೆ ಹೆಬ್ಬಾಳಕರ ವಿರುದ್ಧ ದೂರು ದಾಖಲಿಸುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಸಚಿವರು ತಮ್ಮ ಗೃಹಕಚೇರಿಯಲ್ಲಿ ಮಂಗಳವಾರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹಾಗೂ ಆಶಾ ಕಾರ್ಯಕರ್ತೆಯರ ಸಭೆ ನಡೆಸುತ್ತಿದ್ದರು. ಈ ಸಭೆಯಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕಾರ್ಯಕರ್ತೆಯರು ಸೇರಿದ್ದರು. ಸುದ್ದಿ ತಿಳಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿದರು. ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಂದಲೂ ವಿವರ ಪಡೆದರು.
ಚುನಾವಣೆಯಲ್ಲಿ ತಮ್ಮ ಮಗನ ಪರವಾಗಿ ಮತಗಳನ್ನು ಹಾಕಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗ ಎಂದು ದೂರು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ’ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

Previous articleಬೆಳಗಾವಿ ಟಿಕೆಟ್ ನನಗೇ
Next articleಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ