ಸತೀಶ್ ವಿರುದ್ಧ ಶಾ ವಾಗ್ದಾಳಿ

0
12

ಹುಕ್ಕೇರಿ(ಬೆಳಗಾವಿ): ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯ ತಂದೆ ಅನಧಿಕೃತವಾಗಿ ಗಣಿಗಾರಿಕೆ ಮಾಡ್ತಾರೆ. ಅವರ ಕುಟುಂಬಸ್ಥರು ಗುಡ್ಡ ಕಟಾವು ಮಾಡಿ ಜಾಗ ಕಬ್ಜಾ ಮಾಡಿದ್ದಾರೆ. ಹಿಂದೂ ಸಂಸ್ಕೃತಿ ಹಾಗೂ ಹಿಂದೂ ಮಹಾನ್ ನಾಯಕರ ಅಪಮಾನಿಸುತ್ತಾರೆ. ಶಿವಾಜಿ ಮಹಾರಾಜ ಮತ್ತು ಸಂಭಾಜಿ ಮಹಾರಾಜರ ಬಗ್ಗೆ ಕೆಟ್ಟದಾಗಿ ಮಾತಾಡ್ತಾರೆ ಎಂದು ಹರಿಹಾಯ್ದರು.
ಕಳ್ಳಬಟ್ಟಿ ಸಾರಾಯಿ ತಯಾರಿಸುವವರು ಇವರ ಜೊತೆಗೆ ಇದ್ದಾರೆ. ಸಾವಿರಾರು ಎಕರೆ ಜಮೀನು ಕಬಳಿಸಿದ್ದಾರೆ. ಕಮಿಷನ್ ಪಡೆಯಲು ಅವರ ಏಜೆಂಟರು ನಿರತರಾಗಿದ್ದಾರೆ ಎನ್ನುವುದರ ಮೂಲಕ ಶಾ
ಜಾರಕಿಹೊಳಿ ಕುಟುಂಬದ ವಿರುದ್ಧವೇ ಗಂಭೀರ ಆರೋಪ ಮಾಡಿದರು.

Previous articleಬೆಳಗಾವಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ
Next articleನೇಹಾ ಪ್ರಕರಣ ಸಿಬಿಐಗೆ ಕೊಟ್ಟರೆ ಅಪರಾಧಿಗೆ ಉಲ್ಟಾ ನೇತು ಹಾಕುತ್ತೇವೆ