ಸದನದಲ್ಲಿ ಅಂಬೇಡ್ಕರ್‌ ಭಾವಚಿತ್ರವಿಟ್ಟು ಪ್ರತಿಭಟನೆ

0
33

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿಗರ ಮುಂದೆ ಕಾಂಗ್ರೆಸ್ಸಿಗರು ಅಮಿತ್ ಶಾ ಹೇಳಿಕೆಯನ್ನು ಮುಂದಿಟ್ಟು ವಿರೋಧ ವ್ಯಕ್ತಪಡಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು. ಈ ನಡೆಗೆ ಆಕ್ರೋಶಗೊಂಡ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರತಿಭಟನೆ ನಡೆಸಿದರು.

Previous articleಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ
Next articleಕಾರಂಜಾ ಜಲಾಶಯ: ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ