Home Advertisement
Home ನಮ್ಮ ಜಿಲ್ಲೆ ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಲಹೆ

ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಲಹೆ

0
114
cm

ಬೆಂಗಳೂರು: ಜಿಲ್ಲಾಧಿಕಾರಿಗಳು ಸಮಯೋಚಿತ ತೀರ್ಮಾನಗಳ ಮೂಲಕ ಜನರಿಗೆ ನೆರವಾಗಬೇಕು. ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯ ಆದಕ್ಷತೆ ವಹಿಸಿ ಮಾತನಾಡಿದರು. ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಮಹತ್ವಪೂರ್ಣ ಅವಕಾಶ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಬಿಡುತ್ತೀರಿ ಎನ್ನುವುದು ಮುಖ್ಯವಾದುದು. ಈಗ ಬಹಳಷ್ಟು ಅಧಿಕಾರಿಗಳು ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರ ಭಾಗವನ್ನಷ್ಟೇ ನೋಡುತ್ತಾರೆ. ಆ ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ನೀವು ಆಡಳಿತದ ಭಾಗವಾಗಿದ್ದೀರಿ. ನಿಮಗೆ ಹೆಚ್ಚಿನ ಅಧಿಕಾರವೂ ಇದೆ. ನೀವು ಕೈಗೊಳ್ಳುವ ನಿರ್ಣಯಗಳು ಆಡಳಿತ ನಿರ್ವಹಣೆಯಲ್ಲಿ ಬಹಳ ಮುಖ್ಯ ಎಂದು ತಿಳಿಸಿದರು. ಯಾವುದೇ ಕೆಲಸ ಮಾಡಬಾರದು ಅಂದುಕೊಂಡರೆ, 101 ಕಾರಣ ದೊರೆಯುತ್ತದೆ. ಒಂದು ಒಳ್ಳೆಯ ಕೆಲಸ ಮಾಡಬೇಕೆಂದರೆ ಒಂದೇ ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ಸಲಹೆ ನೀಡಿದರು.
ಇಂದಿನ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮುಕ್ತವಾಗಿ ತಮ್ಮ ಅನುಭವ ಹಂಚಿಕೊಳ್ಳಬೇಕು. ಆಗ ಸರ್ಕಾರ ಸೂಕ್ತ ನಿರರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.