ಭಟ್ಕಳ: ಸಚಿವ ಮಂಕಾಳ ವೈದ್ಯ ಸಮುದ್ರಕ್ಕೆ ಜಿಗಿದು ಈಜಾಡಿದ ಘಟನೆ ನಡೆದಿದೆ.
ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮ ಪಡಿಸಲು ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಡಿ ಕೃತಕ ಬಂಡೆಸಾಲುಗಳ ಅಳವಡಿಕೆ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ದಡದಿಂದ ಸುಮಾರು ದೂರದಲ್ಲಿ ಸಮುದ್ರಕ್ಕೆ ಜಿಗಿದು ಕೆಲ ಹೊತ್ತು ಈಜಾಡಿದ್ದಾರೆ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
























