Home Advertisement
Home ತಾಜಾ ಸುದ್ದಿ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?

ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?

0
61

ಬೆಂಗಳೂರು: ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್‌ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?

•ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ. ಒಂದು ಲೀಟರ್ ಹಾಲಿನ ಸಬ್ಸಿಡಿಯನ್ನು ₹7 ಹೆಚ್ಚಿಸುತ್ತೇವೆ ಎಂದು ಚುನಾವಣೆ ವೇಳೆ ಕಾಂಗ್ರೆಸ್ ಸುಳ್ಳು ಹೇಳಿದ್ದೇ ಹೇಳಿದ್ದು. ಹೆಚ್ಚಿಸುವ ಮಾತಿರಲಿ, ಇದ್ದ ಸಬ್ಸಿಡಿಯನ್ನೂ (ಲೀಟರ್ ಹಾಲಿಗೆ ₹5) ಕೊಡದೇ 7 ತಿಂಗಳಿಂದ ಸತಾಯಿಸುತ್ತಿದೆ.

•ಗೋವಿನ ಆಹಾರವಾದ ಹಿಂಡಿ, ಬೂಸಾ ಬೆಲೆ ಗಗನಕ್ಕೇರಿದೆ. ಮೇವೂ ಸಿಗುತ್ತಿಲ್ಲ. ಇಂಥ ಕಡು ಸಂಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ಕೂಡಲೇ ರಾಜ್ಯ ಸರಕಾರ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಬೇಕು ಎಂದಿದ್ದಾರೆ.

Previous articleದಾಖಲೆಯ ಜಿಎಸ್‌ಟಿ ಸಂಗ್ರಹ
Next articleಪೆನ್ ಡ್ರೈವ್ ಪ್ರಕರಣ ಬಳಿಕ ಫಸ್ಟ್ ರಿಯಾಕ್ಷನ್: ವಕೀಲರ ಮೂಲಕ ಸಿಐಡಿಗೆ ಮನವಿ ಮಾಡಿದ ಪ್ರಜ್ವಲ್