Home ಅಪರಾಧ ಸರಣಿ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಸರಣಿ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

0

ಕಲಬುರಗಿ: ಟ್ರಕ್, ಕಾರ್ ಮತ್ತು ಬೈಕ್ ಮಧ್ಯೆ ರಸ್ತೆ ಅಪಘಾತ ಸಂಭವಿಸಿ, ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಹಸನಾಪುರ್ ಕ್ರಾಸ್ ಬಳಿ ಬುಧವಾರ ೧೨ ಗಂಟೆ ಸುಮಾರಿಗೆ ನಡೆದಿದೆ.
ಮೃತರು ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದಾರೆಂದು ಗುರುತಿಸಲಾಗಿದೆ. ಇನ್ನು ಓರ್ವ ಮಹಿಳೆ ಮತ್ತು ಮೂವರು ಪುರುಷರು ಗಂಭೀರ ಗಾಯಗಳಾಗಿವೆ. ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯಕ್ಕೆ ಮೃತರ ವಿವರ ಲಭ್ಯವಾಗಿಲ್ಲ.

Exit mobile version