Home News ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿರುವ ಮತಾಂಧ ಶಕ್ತಿಗಳು

ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿರುವ ಮತಾಂಧ ಶಕ್ತಿಗಳು

ದುಷ್ಕೃತ್ಯಗಳಿಗೆ ಕಡಿವಾಣ ಹಾಕದೆ ಹೋದರೆ, ರಾಜ್ಯಾದ್ಯಂತ ಉಗ್ರ ಹೋರಾಟ

ಬೆಂಗಳೂರು: ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ಈ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಚಾಮರಾಜಪೇಟೆಯಲ್ಲಿ ಗೋಮಾತೆಯ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರ ತಾಲ್ಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು, ಗರ್ಭದಿಂದ ಕರು ತೆಗೆದು ಬಿಸಾಡಿ, ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ.

ತುಷ್ಟೀಕರಣ, ಅರಾಜಕತೆಯಿಂದ ನಿಸ್ತೇಜವಾಗಿರುವ ರಾಜ್ಯ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿಕೊಂಡಿರುವ ಮತಾಂಧ ಶಕ್ತಿಗಳು, ಗೋವುಗಳ ಮೇಲೆ ಪ್ರಹಾರ ಮಾಡುವ ಮೂಲಕ ಹಿಂದೂಗಳಿಗೆ ಸವಾಲು ಹಾಕುತ್ತಿವೆ.

ಸಿಎಂ ಸಿದ್ದರಾಮಯ್ಯನವರೇ, ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ಈ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೆ ಇದ್ದಂತಿದೆ.

ಸರ್ಕಾರ ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ದುಷ್ಕೃತ್ಯಗಳಿಗೆ ಕಡಿವಾಣ ಹಾಕದೆ ಹೋದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ, ಎಚ್ಚರಿಕೆ ಎಂದಿದ್ದಾರೆ.

Exit mobile version