ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಸಲ್ಲಿಸಿವೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದಲೂ ಸಂಸತ್ತಿನ ಉಭಯ ಸದನಗಳಲ್ಲಿ ನಿರಂತರವಾಗಿ ಎಲ್ಲಾ ಪ್ರತಿಪಕ್ಷಗಳ ನಾಯಕರು ಮಣಿಪುರ ವಿಷಯದ ಬಗ್ಗೆ ಪ್ರಧಾನಿ ಮೋದಿಯವರು ಮಣಿಪುರದ ಕುರಿತು ಮಾತನಾಡಬೇಕು ಎಂದು ಪ್ರತಿಭಟನೆ ಮತ್ತು ಘೋಷಣೆಗಳನ್ನು ನಡೆಸುತ್ತ ಬಂದಿದ್ದರು. ಕೇವಲ ಇಂಡಿಯಾ ಒಕ್ಕೂಟ ಮಾತ್ರವಲ್ಲದೆ ಬಿಆರ್ಎಸ್ ಪಕ್ಷ ಕೂಡ ಪ್ರತ್ಯೇಕ ಅವಿಶ್ವಾಸ ನಿರ್ಣಯ ಸಲ್ಲಿಸಿದೆ. ಪ್ರಧಾನಿ ಮೋದಿಯವರು ಈ ಕುರಿತು ಮೌನ ಮುರಿಯಬೇಕು ಆಗ ಮಾತ್ರ ದೇಶದ ಜನರಲ್ಲಿ ಶಾಂತಿ ನೆಲೆಸುತ್ತದೆ ಆದ್ದರಿಂದ ಈ ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಆರ್ಎಸ್ ಸಂಸದ ನಾಮ ನಾಗೇಶ್ವರ ತಿಳಿಸಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅನುಮತಿ ನೀಡಿದ್ದಾರೆ. ಇದಕ್ಕಾಗಿ ದಿನಾಂಕ ಮತ್ತು ಸಮಯ ಇನ್ನೂ ನಿರ್ಧರಿಸಬೇಕಿದೆ. ‘ನಾನು ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸುತ್ತೇನೆ ಮತ್ತು ಇದರ ಮೇಲಿನ ಚರ್ಚೆಗೆ ಸೂಕ್ತ ಸಮಯವನ್ನು ನಿಮಗೆ ತಿಳಿಸುತ್ತೇನೆ’ ಎಂದು ಸ್ಪೀಕರ್ ಹೇಳಿದ್ದಾರೆ.