ಸರ್ಕಾರ ಯಾವುದೇ ಶಾಲೆ ಮುಚ್ಚಲ್ಲ

0
28

ಬೆಳಗಾವಿ: ರಾಜ್ಯದ ವಿವಿಧ ಭಾಗಗಳಲ್ಲಿರುವ ೪೬ ಸಾವಿರ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದು ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪರಿಸ್ಥಿತಿಯಲ್ಲಿ ಬೇರೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಯಾವುದೇ ಶಾಲೆ ಮುಚ್ಚುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಈಗಾಗಲೇ ರಾಜ್ಯಾದ್ಯಂತ ಒಟ್ಟು ೧೩,೦೦೦ ಶಿಕ್ಷಕರ ನೇಮಕಾತಿ ನಡೆದಿದೆ. ಇದಕ್ಕೂ ಮುನ್ನ ರಾಜ್ಯದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇತ್ತು. ಆದರೆ ಈಗ ಆ ಸಮಸ್ಯೆ ಕಡಿಮೆಯಾಗುತ್ತಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದು ಹೇಳಿದರು.

Previous articleಗಡಿ ವಿವಾದ ಕೆಣಕಿದ ಠಾಕ್ರೆ
Next articleಜನವರಿ 24ಕ್ಕೆ ರಿಷಿ ‘ಗರುಡ ಪುರಾಣ’