ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ಆರೋಪಿ ಹಾವೇರಿಯಲ್ಲಿ ಬಂಧನ

0
36

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ಥಾನ ಮೂಲದ ಬಿಖಾರಾಮ್ ಉರ್ಫ್ ವಿಕ್ರಂ ತಂದೆ ಜಲಾರಾಮ್ ಎಂಬಾತನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ.
ರಾಜಸ್ಥಾನ ಮೂಲದ ಬಿಖಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಖಾರಾಮ್ ಕೂಲಿಗಾಗಿ ಹಾವೇರಿಗೆ ಬಂದಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ವಶಕ್ಕೆ ಪಡೆದು ಅವರಿಗೆ ಒಪ್ಪಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Previous articleಪ್ಯಾಲೆಸ್ತೈನ್‌ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್
Next articleದೈಹಿಕ ಸಂಬಂಧ ಹೊಂದದ ಪತಿ ವಿರುದ್ಧ ಮಹಿಳೆ ದೂರು