ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

0
14

ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದದವರಿಗೆ 18, ಇತರರಿಗೆ 6 ಹುದ್ದೆ ಮೀಸಲು.

ಬೆಂಗಳೂರು: 24 ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 24 ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದದವರಿಗೆ 18, ಇತರರಿಗೆ 6 ಹುದ್ದೆ ಮೀಸಲು. ಆಗಸ್ಟ್ 5ರಿಂದ 25ವರೆಗೆ ಆನ್ ಲೈನ್ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 3 & 4 ಲಿಖಿತ ಪರೀಕ್ಷೆ ಇರುತ್ತದೆ ಎಂದು ತಿಳಿಸಿದೆ.

Previous articleಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ
Next articleರಾಂಪುರ ಮೇಘಸ್ಫೋಟ: ಗಡಿ ಪ್ರದೇಶದಲ್ಲಿ ಕನಿಷ್ಠ 20 ಮಂದಿ ನಾಪತ್ತೆ