ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ ಫಲಿತಾಂಶ ಪಟ್ಟಿ ಪ್ರಕಟ

0
20

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದಂತ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ.
ಈ ಸಂಬಂಧ ಎಕ್ಸ್ನಲ್ಲಿ ಕೆಇಎ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದ್ದು, ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ ೪೧ ವಿಷಯಗಳಿಗೆ ಜನವರಿ ೧೩ರಂದು ನಡೆದ ಪರೀಕ್ಷೆಯಲ್ಲಿ ೬,೬೭೫ ಮಂದಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದೆ. ಒಟ್ಟು ೧,೧೭,೩೦೩ ಮಂದಿ ನೋಂದಾಯಿಸಿಕೊಂಡು, ೯೫,೨೦೧ ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ ೬,೬೭೫ ಮಂದಿ ಅರ್ಹತೆ ಪಡೆದಿದ್ದಾರೆ.

Previous articleರಾಜ್ಯದಲ್ಲಿ ವಾರದಲ್ಲಿ ೩೪೫ ಹಾವು ಕಡಿತ
Next articleಬಿಜೆಪಿಗೆ ೪೦೦ ಸೀಟು ಬರಿ ಬುರುಡೆ