Home Advertisement
Home ತಾಜಾ ಸುದ್ದಿ ಸಾಂಕೇತಿಕವಾಗಿ ಇಂದು ಶಿಗ್ಗಾಂವಿಯಲ್ಲಿ ನಾಮಪತ್ರ

ಸಾಂಕೇತಿಕವಾಗಿ ಇಂದು ಶಿಗ್ಗಾಂವಿಯಲ್ಲಿ ನಾಮಪತ್ರ

0
149
CM ನಾಮಪತ್ರ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಿಗ್ಗಾವಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಗೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ದ್ಯಾಮವ್ವ ಗುಡಿಗೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿದರು. ನಂತರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ತಹಶೀಲ್ದಾರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಸಾಥ್ ನೀಡಿದರು. ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಏ. 19ಕ್ಕೆ ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.