Home ನಮ್ಮ ಜಿಲ್ಲೆ ಚಿಕ್ಕಮಗಳೂರು ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

0

ಬೆಂಗಳೂರು: ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಸಾರಿಗೆ ನೌಕರರು ಮುಂದೂಡಿದ್ದಾರೆ.
ಭಾನುವಾರ ರಾತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದ ಬೆನ್ನಲ್ಲೇ ಕ್ರಿಯಾ ಸಮಿತಿ ಮುಷ್ಕರದಿಂದ ಹಿಂದೆ ಸರಿಯಲು ತೀರ್ಮಾನಿಸಿದೆ. ಜನವರಿ 15ರಂದು ಸಿಎಂ ಸಿದ್ದರಾಮಯ್ಯ ರಸ್ತೆ ಸಾರಿಗೆ ನೌಕರರ ಜೊತೆ ಸಭೆ ನಡೆಸುವ ಭರವಸೆ ನೀಡಿದ್ದು, ಡಿ.31ರಿಂದ ಮಾಡಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯಲು ಕೆಎಸ್​ಆರ್​ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

Exit mobile version