ಸಾಹಿತಿಗಳಾದ ಗುಲ್ಜಾರ್‌, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಜ್ಞಾನಪೀಠ ಪ್ರಶಸ್ತಿ

0
30

ದೆಹಲಿ: ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯ ಹಾಗೂ ಖ್ಯಾತ ಉರ್ದು ಕವಿ ಗುಲ್ಜಾರ್ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.
ರಾಮಭದ್ರಾಚಾರ್ಯ: ರಾಮಭದ್ರಾಚಾರ್ಯ ಅವರು 1950 ಜನವರಿ 14ರಂದು ಉತ್ತರ ಪ್ರದೇಶದ ಜಾನ್ಪುರ್ ಜಿಲ್ಲೆಯ ಶಾಂದಿಖುರ್ದ್ ಎಂಬಲ್ಲಿ ಜನಿಸಿದರು. ಚಿತ್ರಕೂಟದಲ್ಲಿರುವ ಜಗದ್ಗುರು ರಾಮಭದ್ರಾಚಾರ್ಯ ಅಂಗವಿಕಲರ ವಿಶ್ವವಿದ್ಯಾಲಯದ ಸಂಸ್ಥಾಪಕರು ಮತ್ತು ಆಜೀವ ಕುಲಪತಿಯಾಗಿದ್ದಾರೆ.
ಗುಲ್ಜಾರ್: ಹಿಂದಿ ಚಿತ್ರರಂಗದಲ್ಲಿ ಸಿನಿಮಾ ಸಾಹಿತಿಯಾಗಿ ಗುರುತಿಸಿಕೊಂಡಿದ್ದು. ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಅವರು ಒಬ್ಬರು, 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Previous articleಶಾಲಾ ಬಸ್ ಪಲ್ಟಿ: 25 ಕ್ಕೂ ಅಧಿಕ ಮಕ್ಕಳಿಗೆ ಗಾಯ
Next articleಹವಾಮಾನ ಉಪಗ್ರಹ ಉಡಾವಣೆ ಯಶಸ್ವಿ