ಸಿಎಂ ಗಲ್ಲಿಗಲ್ಲಿ ಓಡಾಡುತ್ತಿದ್ದಾರೆ

0
17

ಹಾವೇರಿ: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ಧವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ. ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನದಿ ಹರಳಹಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕೂ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ನಾಯಕರು ಒಬ್ಬೊಬ್ಬರು ಒಂದೊಂದು ಸುಳ್ಳು ಹೇಳುತ್ತಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಾಂಗ್ರೆಸ್ ನಿರಂತರವಾಗಿ ಸುಳ್ಳು ಹೇಳುತ್ತಲೇ ಬಂದಿದೆ. ಇಂದಿರಾಗಾಂಧಿಯವರು ಗರೀಬಿ ಹಠಾವೊ ಅಂತ ಹೇಳಿದ್ದರು. ದೇಶದಲ್ಲಿ ಈಗಲೂ ಬಡತನ ಇದೆ. ಅವರು ಸುಳ್ಳು ಹೇಳುತ್ತಾರೆ ಎನ್ನುವುದಕ್ಕೆ ಇಂದೊಂದೆ ಸಾಕ್ಷಿ ಸಾಕು ಎಂದು ಹೇಳಿದರು.
ಹೆಣ್ಣು ಮಕ್ಕಳ ಚಪ್ಪಲಿ ಸವೆದಿದೆ….
ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆಗಳನ್ನು ಕೊಡುವಲ್ಲಿಯೂ ಸುಳ್ಳು ಹೇಳುತ್ತಿದ್ದಾರೆ. ಎಲ್ಲರಿಗೂ ಯೋಜನೆಗಳು ಸಿಗುತ್ತಿಲ್ಲ. ಶೇ. ಇಪ್ಪತೈದರಷ್ಟು ಜನರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಅದೂ ಹೆಣ್ಣು ಮಕ್ಕಳು ಸರ್ಕಾರಿ ಕಚೇರಿಗೆ ತಿರುಗಾಡಿ ಚಪ್ಪಲಿ ಸವೆಸಿಕೊಳ್ಳುತ್ತಿದ್ದಾರೆ ಎಂದು ಎಂದು ಬೊಮ್ಮಾಯಿ ಹೇಳಿದರು.
ಕುಡಿಯಲು ನೀರು, ಅಕ್ಕಿ ಕೊಟ್ಟಿರುವ, ಲಸಿಕೆ ಕೊಟ್ಟಿರುವ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ. ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಹಾಜರಿದ್ದರು.

Previous articleಮಸೀದಿ ಎದುರು ಅಡುಗೆಗೆ ಆಕ್ಷೇಪ, ಉದ್ವಿಗ್ನ
Next articleದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಇಂದು ನಿರ್ಧಾರ