Home ನಮ್ಮ ಜಿಲ್ಲೆ ಸಿಎಂ ದಿಢೀರ್ ಸುದ್ದಿಗೋಷ್ಠಿ

ಸಿಎಂ ದಿಢೀರ್ ಸುದ್ದಿಗೋಷ್ಠಿ

0

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸುದ್ದಿಗೋಷ್ಠಿ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ.
ಇಂದು ಮಧ್ಯಾಹ್ನ 1ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಿನ್ನೆ ಮಂಡನೆಯಾಗಿರುವ ಕೇಂದ್ರ ಬಜೆಟ್ ವಿಚಾರವಾಗಿ ಮಾತನಾಡುವ ಸಾಧ್ಯತೆ ಇದೆ.
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆಗಳ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಿಎಂ ಬೊಮ್ಮಾಯಿ ಕರೆದಿರುವ ಸುದ್ದಿಗೋಷ್ಠಿ ತೀವ್ರ ಕುತೂಹಲ ಮೂಡಿಸಿದೆ.

Exit mobile version