ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

0
14

ಧಾರವಾಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಕೇಳಿಬಂದಿರುವ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಕಳೆದ ದಿ. ೨೭ರಂದು ಸಂಪೂರ್ಣ ವಾದ ವಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪನ್ನು ಕಾಯ್ದಿಸಿದ್ದರು.
ಶುಕ್ರವಾರ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ರಾಜ್ಯ ಮಾತ್ರವಲ್ಲದೇ ದೇಶದಲ್ಲಿಯೇ ಸಂಚಲನ ಮೂಡಿಸಿದ್ದ ಪ್ರಕರಣ ತಾತ್ಕಾಲಿಕವಾಗಿ ಬ್ರೇಕ್ ಪಡೆದಿದ್ದು, ಮುಂದೆ ಯಾವ ತಿರುವು ಪಡೆಯಲಿದೆ ಎನ್ನುವುದು ಕೌತುಕ ಮೂಡಿಸಿದೆ.

Previous articleಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ
Next articleಮುಡಾ ಪ್ರಕರಣ: ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರುವೆವು