Home Advertisement
Home ತಾಜಾ ಸುದ್ದಿ ಸಿಡಿಲು ಬಡಿದು ಯುವಕ ಸಾವು

ಸಿಡಿಲು ಬಡಿದು ಯುವಕ ಸಾವು

0
115

ಹುಬ್ಬಳ್ಳಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ನಗರ ಹೊರವಲಯದ ತಾರಿಹಾಳದಲ್ಲಿ ಮಂಗಳವಾರ ಸಂಜೆ ನಡೆದಿದೆ.
ತಾರಿಹಾಳದ ಅರುಣ ಚುರುಮುರಿ(೧೮) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ. ತಾರಿಹಾಳದ ಜೋಡಳ್ಳಿ ರಸ್ತೆಯಲ್ಲಿ ಜಾನುವಾರು ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.