Home ತಾಜಾ ಸುದ್ದಿ ಸಿದ್ದರಾಮಯ್ಯನವರದ್ದು ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರ

ಸಿದ್ದರಾಮಯ್ಯನವರದ್ದು ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರ

0

ವಿಜಯಪುರ: ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ. ರಾಜ್ಯ-ರಾಷ್ಟ್ರ ನಾಯಕರೊಂದಿಗೆ ಸೇರಿ ರಾಜ್ಯದ 28 ಕ್ಷೇತ್ರದಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲ್ಲಲು ಎಲ್ಲ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆ ಸ್ಪರ್ಧೆ ಮಾಡಬೇಕು ಎನ್ನುವ ಕೂಗು ಪಕ್ಷದಲ್ಲಿ ಇಲ್ಲ. ಸದ್ಯ ನಡೆಯುತ್ತಿರುವ ಮಾದಿಗರ ಆತ್ಮಗೌರವ ಸಮಾವೇಶ. ಇದೊಂದು ಸಾಮಾಜಿಕ ನ್ಯಾಯದ ಹೋರಾಟ, ಜನರ ಎಚ್ಚರಿಸುವ ಕೆಲಸ ಇದಕ್ಕೂ ಲೋಕಸಭಾ ಚುನಾವಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ದೇಶಕ್ಕೆ ಸಂವಿಧಾನವಿದೆ, ಶಿಕ್ಷಣ, ಆರೋಗ್ಯ ಹಾಗೂ ಜನರ ಕಲ್ಯಾಣದ ಬಗ್ಗೆ ಸಂವಿಧಾನವನ್ನು ಪಾಲಿಸಬೇಕಾಗುತ್ತದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯವಾಗಿವೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿ ಲಂಚ ತಿನ್ನುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ. ಜನರ ಅಸಮಧಾನವನ್ನು ಬೇರೆಡೆಗೆ ಸೆಳೆಯಲು ಗಿಮಿಕ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Exit mobile version