ಕೊಪ್ಪಳ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಕೊಪ್ಪಳ ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗೆ ಇಂದು ಕ್ಷೇತ್ರಕ್ಕಾಗಿ ಅಲೆದಾಡುವ ಪರಿಸ್ಥಿತಿ ಬಂದಿದೆ. ಚುನಾವಣೆ ಬಳಿಕ ಅವರು ನಿರುದ್ಯೋಗಿಯಾಗುತ್ತಾರೆ ಅವರಿಗೆ ಕ್ಷೇತ್ರವೇ ಇಲ್ಲ. ಕೋಲಾರದಲ್ಲಿ ಮುನಿಯಪ್ಪ ಈಗಾಗಲೇ ಮುನಿಸುಗೊಂಡಿದ್ದಾರೆ. ಬಾದಾಮಿ, ವರುಣಾದಲ್ಲಿ ಸ್ಪರ್ಧಿಸಲಿ ನೋಡೊಣ ಎಂದು ಸವಾಲು ಹಾಕಿದರು.