SK Home Ad
Home ತಾಜಾ ಸುದ್ದಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿಗತಿ ಬಗ್ಗೆ ನಿರಂತರ ಮಾಹಿತಿ

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿಗತಿ ಬಗ್ಗೆ ನಿರಂತರ ಮಾಹಿತಿ

0
215
ಬಸವರಾಜ ಬೊಮ್ಮಾಯಿ

ಸಿದ್ಧೇಶ್ವರ ಸ್ವಾಮಿಗಳಿಗೆ ಅವರದ್ದೇ ಆದ ಅಂತರ್ಗತ ಶಕ್ತಿ ಇದೆ. ಅದರ ಮೂಲಕ ಅನಾರೋಗ್ಯವನ್ನು ಗೆದ್ದು ಜಯಶಾಲಿಯಾಗಿ ಬರುತ್ತಾರೆ. ದೀರ್ಘಕಾಲ ನಮ್ಮ ಜೊತೆಗಿದ್ದು, ಆಶೀರ್ವಾದ ಮಾರ್ಗದರ್ಶನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಸಿದ್ದೇಶ್ವರ ಶ್ರೀಗಳ ಆರೋಗ್ಯದ ಬಗ್ಗೆ ಮಾತನಾಡಿದ ಅವರು, ಶ್ರೀಗಳನ್ನು ಭೇಟಿ ಯಾದಾಗ ಗುರುತು ಹಿಡಿದರು. ಮಾತನಾಡಲು ಆಗುತ್ತಿರಲಿಲ್ಲ ಎನ್ನುವುದನ್ನು ಬಿಟ್ಟರೇ ಅವರ ಎಲ್ಲಾ ಅಂಗಾಂಗಗಳ ಮಾನದಂಡಗಳು ಸಾಮಾನ್ಯವಾಗಿಯೇ ಇತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡಿದಾಗ ಧ್ವನಿ ಗುರುತು ಹಿಡಿದು ಶುಭ ಕೋರಿದರು. ಇಂದೂ ಕೂಡ ಅವರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಸಂಬಂಧಪಟ್ಟವರ ಸಂಪರ್ಕದಲ್ಲಿದ್ದೇನೆ. ಯಾವುದೇ ಆತಂಕಕ್ಕೆ ಅವಕಾಶವಿಲ್ಲ.