Home ಅಪರಾಧ ಸಿಲಿಂಡರ್ ಸ್ಫೋಟ: ಮೂವರು ಗಂಭೀರ

ಸಿಲಿಂಡರ್ ಸ್ಫೋಟ: ಮೂವರು ಗಂಭೀರ

0

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ತಾರಿಹಾಳದಲ್ಲಿ ಸಂಭವಿಸಿದೆ.
ರಾಜಸ್ಥಾನ ಮೂಲದ ಅಶೋಕ, ಸುಭಾಷ್ ಹಾಗೂ ಮಾಂಗಿಲಾಲ್ ಎಂಬ ಯುವಕರೇ ಗಂಭೀರವಾಗಿ ಗಾಯಗೊಂಡವರು. ಮೂವರ ಸ್ಥಿತಿ ಇದೀಗ ಚಿಂತಾಜನಕವಾಗಿದ್ದು, ಹುಬ್ಬಳ್ಳಿ ‌ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.‌ ಅಡುಗೆ ಮಾಡುವ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಶೇ. 50ರಷ್ಟು ಸುಟ್ಟು ಗಾಯಗಳಾಗಿವೆ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Exit mobile version