Home ಅಪರಾಧ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ

0

ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಿಂದ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5ನೇ ಕ್ರಾಸ್ ರಸ್ತೆಯಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಮಂಗಳೂರು ಪಾಂಡೇಶ್ವರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23) ಹಾಗೂ ಬಂಟ್ವಾಳ ಪಾಣೆ ಮಂಗಳೂರು ನಿವಾಸಿ ರೋಯಸ್ಟನ್ ಕ್ಸವಿಯರ್ ಲೋಬೋ(22) ಎಂಬುವರನ್ನು ವಶಕ್ಕೆ ಪಡೆದುಕೊಂಡು ಅವರಿಂದ 8 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ, ಚರಸ್ ಮತ್ತು ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

Exit mobile version