Home ಅಪರಾಧ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆ

0

ಬೆಂಗಳೂರು: ಬೆಂಗಳೂರಿನ ಸಿಸಿಬಿಯಲ್ಲಿ ಇನ್ಸ್‌ ಪೆಕ್ಟರ್‌ ಆಗಿದ್ದ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮನಗರ ಸಮೀಪದ ಬಿಡದಿಯಲ್ಲಿ ಅವರು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿಡದಿ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ರಾಮನಗರ ಸಹಿತ ನಾನಾ ಕಡೆ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸಿಸಿಬಿ ವಿಭಾಗಕ್ಕೆ ವರ್ಗ ಮಾಡಲಾಗಿತ್ತು. ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಗೆ ದೇಹವನ್ನು ಕಳುಹಿಸಲಾಗಿದೆ. ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Exit mobile version