ಸಿ.ಟಿ. ರವಿಗೆ ಕೊಲೆ ಬೆದರಿಕೆ ಪತ್ರ

0
24

ಚಿಕ್ಕಮಗಳೂರು: ಅವಾಚ್ಯ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಮ್ ಎಲ್ ಸಿ ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ‌.

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಇದೀಗ ಅನಾಮಧೆಯ ಪತ್ರ ಒಂದು ಬಂದಿದ್ದು, ಪತ್ರದಲ್ಲಿ 15 ದಿನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದೆ ಹೋದರೆ ನಿನ್ನ ಹತ್ಯೆ ಮಾಡಲಾಗುತ್ತದೆ ಎಂದು ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ.

ಎಂಎಲ್ಸಿ ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ 15 ದಿನದೊಳಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆಯಾಚಿಸಿ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ ಎಂದು ಚಿಕ್ಕಮಗಳೂರಿನ ಬಸವನಹಳ್ಳಿಯ ಎಂಎಲ್ಸಿ ಸಿಟಿ ರವಿ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ.

ಪತ್ರದ ಕುರಿತು ಇದೀಗ ಬಸವನಹಳ್ಳಿ ಪೊಲೀಸ್ ಠಾಣೆಗೆ ಎಂಎಲ್‌ಸಿ ಸಿಟಿ ರವಿ ಪಿಎ ಚೇತನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಪತ್ರ ಎಲ್ಲಿಂದ ಬಂದಿದೆ ಎಂದು ತನಿಖೆ ಕೈಗೊಂಡಿದ್ದಾರೆ.

Previous articleನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ
Next articleಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್