ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

0
35

ಗೂಂಡಾ ವರ್ತನೆ ತೋರಿದ ಕಾಂಗ್ರೆಸ್ ನಾಯಕರಿಗೆ ದಿಕ್ಕಾರ, ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಕಾಂಗ್ರೆಸ್ ಗೂಂಡಾಗಳಿಗೆ ದಿಕ್ಕಾರ

ಕೊಪ್ಪಳ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ಯರು ನಗರದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಗೂಂಡಾ ವರ್ತನೆ ತೋರಿದ ಕಾಂಗ್ರೆಸ್ ನಾಯಕರಿಗೆ ದಿಕ್ಕಾರ, ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಕಾಂಗ್ರೆಸ್ ಗೂಂಡಾಗಳಿಗೆ ದಿಕ್ಕಾರ ಎಂದು ಕಾಂಗ್ರೆಸ್ ನಾಯಕರ‌ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ, ಗಂಗಾವತಿ ಶಾಸಕ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರತಟ್ನಾಳ, ಚಂದ್ರಶೇಖರ ಕವಲೂರು, ರಾಜು ಬಾಕಳೆ, ಪ್ರದೀಪ ಹಿಟ್ನಾಳ, ರಮೇಶ ಕವಲೂರು, ಮಹಾಲಕ್ಷ್ಮಿ ಕಂದಾರಿ, ಮಹೇಶ ಅಂಗಡಿ ಇದ್ದರು.

Previous articleಸಿ.ಟಿ.ರವಿ ಪ್ರಕರಣ: ಪೊಲೀಸ್ ಕ್ರಮದಲ್ಲಿ ಹಸ್ತಕ್ಷೇಪ ಮಾಡಿಲ್ಲ
Next articleಸಿ.ಟಿ.ರವಿ ಪ್ರಕರಣ: ಅರ್ಜಿ ವಿಚಾರಣೆ ಮಧ್ಯಾಹ್ನ 3ಕ್ಕೆ ಮುಂದೂಡಿಕೆ