ಸೀಟು ಹಂಚಿಕೆ ವಿಚಾರದಲ್ಲಿ ಮೂಡದ ಒಮ್ಮತ, ಸಿಎಂ ಸ್ಥಾನಕ್ಕೆ ರಾಜೀನಾಮೆ..?

0
13

ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (JJP)ಗಳ ನಡುವೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಮಾತುಕತೆಯಲ್ಲಿ ಉಂಟಾದ ಭಿನ್ನಾಭಿಪ್ರಾಯಗಳ ನಡುವೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಚಂಡೀಗಢ: ಹರ್ಯಾಣ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಹರಿಯಾಣದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಇಡೀ ಸಂಪುಟವು ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳು ಇಂದು ಬೆಳಿಗ್ಗೆಯಿಂದಲೇ ಇದ್ದವು. ಮತ್ತು ದಿನ ಕಳೆದಂತೆ, ಹರಿಯಾಣ ಮುಖ್ಯಮಂತ್ರಿಯಾಗಿದ್ದ ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಇಡೀ ಸಂಪುಟ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಯೂ ಬಂದಿದೆ. ಇಂದು ಹರಿಯಾಣದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ.

Previous articleಸಿಟ್ಟಿಗೆದ್ದ ರಾಖಿ-ಏನುಳಿದಿದೆ ಬಾಕಿ?
Next articleಕ್ರಿಕೆಟ್​ ಆಡಲು ರಿಷಭ್ ಪಂತ್​ ಫಿಟ್​