Home ತಾಜಾ ಸುದ್ದಿ ಸುಪ್ರೀಂಕೋರ್ಟ್: ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ

ಸುಪ್ರೀಂಕೋರ್ಟ್: ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ

0

ನವದೆಹಲಿ: ಬರ ಪರಿಹಾರವನ್ನು ಕೇಂದ್ರ ಸರ್ಕಾರ ಈವರೆಗೆ ನೀಡಿಲ್ಲ ಎಂದು ಆಕ್ಷೇಪಿಸಿ, ಶೀಘ್ರ ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ಕರ್ನಾಟಕವು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್​ನ ನ್ಯಾ.ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಸೋಮವಾರದ (ಏ.29)ರ ಒಳಗೆ ಬರ ಪರಿಹಾರ ಬಿಡುಗಡೆ ಬಗ್ಗೆ ತಿರ್ಮಾನಿಸಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೇಳಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿದೆ.

Exit mobile version