Home ನಮ್ಮ ಜಿಲ್ಲೆ ಧಾರವಾಡ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಮಾಜಿ ಸಿಎಂ ಶೆಟ್ಟರ

ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಮಾಜಿ ಸಿಎಂ ಶೆಟ್ಟರ

0
SHETTAR

ಹುಬ್ಬಳ್ಳಿ : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ 10 ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಮೂರ್ತಿಗಳು ಪರವಾಗಿ ತೀರ್ಪು ನೀಡಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ಜಗದೀಶ ಶೆಟ್ಟರ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ ಕಲ್ಪಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಜನತಾ ಪಕ್ಷದ ಆಶಯ ಮತ್ತು ಕಳಕಳಿಯಾಗಿತ್ತು. ಇದಕ್ಕೆ ಪೂರಕವಾಗಿ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಪೀಠದಲ್ಲಿ ಮೂವರು ನ್ಯಾಯಮೂರ್ತಿಗಳು ಪರವಾಗಿ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ ಎಂದರು.

Exit mobile version