ಶ್ರೀರಂಗಪಟ್ಟಣ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತೀನಿತ್ಯ 5000 ಕ್ಯೂಸೆಕ್ ನೀರು ಬಿಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಖಂಡಿಸಿ ಶ್ರೀರಂಗಪಟ್ಟಣದ ರೈತರು ಕನ್ನಂಬಾಡಿ ಅಣೆಕಟ್ಟೆ ಮುತ್ತಿಗೆ ಹಾಕಲು ಯತ್ನಿಸಿದ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.
ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಳ್ಳೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ಕೆಆರ್ ಎಸ್ ಕನ್ನಂಬಾಡಿ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮದ್ಯ ಪ್ರವೇಶಿಸಿದ ಪೊಲೀಸರು ರೈತರನ್ನು ಬಂಧಿಸಿದ್ದಾರೆ.
ಇದಕ್ಕೂ ಮೊದಲು ಅಣೆಕಟ್ಟೆ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದ ರೈತರು, ಸುಪ್ರೀಂ ಕೋರ್ಟ್ ನಮಗೆ ಮರಣ ಶಾಸನ ವಿಧಿಸಿದ್ದು ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಸಲಹಾ ಸಮಿತಿಗೆ ವಾಸ್ತವವನ್ನು ಮನದಟ್ಟು ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರಕ್ಕೆ ರಾಜ್ಯದ ಹಿತಕ್ಕಿಂತ ತಮಿಳುನಾಡಿನ ಒಲೈಕೆಯೇ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಷ ಸಂಪರ್ಕ.
ಜೊತೆಗೆ ನೀರಾವರಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತ, ಕಾವೇರಿ ನೀರನ್ನು ನಾವೇ ರಕ್ಷಣೆ ಮಾಡಿಕೊಳ್ಳುತ್ತೇವೆ. ಅಣೆಯ ಕೀಯನ್ನು ನಮಗೆ ನೀಡುವಂತೆ ಒತ್ತಾಯಿಸಿ ಅಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಬಂಧಿಸಕಟ್ಟೆಕಟ್ಟೆ ಠಾಣೆಗೆ ಕರೆದೊಯ್ದಿದ್ದಾರೆ.
