ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ

0
35
ಕಿತ್ತೂರು ಉತ್ಸವ

ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ “ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ”ಗೆ ಚಾಲನೆ ನೀಡಿ ಮಾತನಾಡಿದರು.
ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಆಗಿದೆ. ಮಧ್ಯೆ ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು, ಆಗ ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳೆಸಿದೆ ಎಂದರು.

ಕಿತ್ತೂರು ಉತ್ಸವ
Previous articleRSS ಪಥ ಸಂಚಲನ: ಕೇಸರಿಮಯಗೊಂಡ ಬಾಗಲಕೋಟೆ
Next articleಕಾಂಗ್ರೆಸ್‌ ಬೇಲ್ ಪಾರ್ಟಿ: ಬೊಮ್ಮಾಯಿ