Home ತಾಜಾ ಸುದ್ದಿ ಸುಹಾಸ್ ಶೆಟ್ಟಿ ಪ್ರಕರಣ: ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ

ಸುಹಾಸ್ ಶೆಟ್ಟಿ ಪ್ರಕರಣ: ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ

0

ಊಹಾಪೋಹದ ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿಯವರು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ತಿಳಿಸಲಿ

ಮಂಗಳೂರು: ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಆರೋಪಿಗಳನ್ನು ಬಂಧನ ಮಾಡಲಾಗಿದೆ, ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಇಲಾಖೆ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ, ಈಗಾಗಲೇ ಅನೇಕ ಜನರ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ, ಫೇಕ್ ಅಕೌಂಟ್ ಮೂಲಕ ಪ್ರಚೋದನೆ ನೀಡಲಾಗುತ್ತಿದೆ, ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ, ಎಲ್ಲಾ ಹತ್ಯೆಗಳ ಕಾರಣ ತಿಳಿದುಕೊಂಡು ಸರ್ಕಾರ ಜವಾಬ್ದಾರಿ ನಿರ್ವಹಣೆ ಮಾಡುತ್ತದೆ ಎಂದರು.

ಶಾಸಕ ಹರೀಶ್ ಪೂಂಜಾ ವೈಯುಕ್ತಿಕ ಟೀಕೆ: ಹರೀಶ್ ಪೂಂಜ ಹೇಳಿಕೆ ಕುರಿತಂತೆ ಮಾತನಾಡಿ ಸಂಸ್ಕೃತಿ ಇರುವ ವ್ಯಕ್ತಿ ಆ ತರಹದ ಹೇಳಿಕೆ ನೀಡೋದಿಲ್ಲ, ಕೋಮುಪ್ರಚೋದನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಆಗಬೇಕಾಗುತ್ತದೆ. ಅವರು ಮಾಡಿರುವ ವೈಯಕ್ತಿಕ ಟೀಕೆ ಕೀಳು ಅಭಿರುಚಿಯಿಂದ ಕೂಡಿದೆ. ಅವರ ಮಾತುಗಳು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ. ಹೀಗಾಗಿ ಪ್ರತ್ಯುತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.

ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸುಹಾಸ್ ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದೆ, ಕೊಲೆ ಯಾರು ಮಾಡಿದ್ದಾರೆ ಅವರನ್ನು ಬಂಧಿಸಿದ್ದೇವೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಗೃಹ ಇಲಾಖೆಯ ವಿಷಯಗಳ ಜವಾಬ್ದಾರಿಗಳ ಬಗ್ಗೆ ಮಾತಾನಾಡೋದಿಲ್ಲ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬ ಬಿಜೆಪಿಯವರ ಕಪೋಲಕಲ್ಪಿತ ಆರೋಪಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಅನೇಕ ಪ್ರಕರಣವನ್ನು ಸಿಬಿಐಗೆ ಕೊಟ್ರೂ ತನಿಖೆ ಅಷ್ಟೇನೂ ಪ್ರಗತಿಯಾಗಿಲ್ಲ, ನಮ್ಮ ಉದ್ದೇಶ ನಿಷ್ಪಕ್ಷಪಾತವಾಗಿ ತನಿಖೆ ಮಾಡೋದಾಗಿದೆ, ಪೊಲೀಸರೂ ಎಲ್ಲಾ ಆ್ಯಂಗಲ್ ಗಳಲ್ಲಿ ತನಿಖೆ ಮಾಡಿದ್ದಾರೆ, ಹತ್ಯೆ ಹಿಂದೆ ಸಂಘಟನೆಗಳು ಇರುವ ಬಗ್ಗೆಯೂ ತನಿಖೆ ಮಾಡಲಾಗುತ್ತಿದೆ, ಅವರ ಊಹಾಪೋಹಕ್ಕೆ ಉತ್ತರ ಕೊಡೋಕೆ ಆಗಲ್ಲ, ಎಂದರು

Exit mobile version