ಸ್ಕೂಟರ್‌ಗೆ ಬಸ್‌ ಡಿಕ್ಕಿ: ತಾಯಿ-ಮಗಳು ಸಾವು

0
14

ಕಾರವಾರ: ಸ್ಕೂಟರ್‌ಗೆ ಬಸ್ ಡಿಕ್ಕಿ ಹೊಡೆದು ತಾಯಿ ಮತ್ತು ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಗ್ರಾಮದ ಬಳಿ ನಡೆದಿದೆ.
ಸವಿತಾ ಆಚಾರಿ(40) ಹಾಗೂ ಅಂಕಿತಾ ಆಚಾರಿ(17) ಮೃತ ರ್ದುದೈವಿಗಳು. ಭಟ್ಕಳ ತಾಲೂಕಿನ ಮುರ್ಡೇಶ್ವರದ ಮಾವಳ್ಳಿ ನಿವಾಸಿಗಳಾದ ಸವಿತಾ ಮತ್ತು ಅಂಕಿತಾ ಅವರು ಸ್ಕೂಟರ್‌ನಲ್ಲಿ ಸಾಗುತ್ತಿದ್ದರು ಈ ವೇಳೆ ಮಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಏಕಾಏಕಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಕುರಿತು ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous articleನಿಮ್ಮ ತುಘಲಕ್‌ ಆಡಳಿತ ಕರ್ನಾಟಕದಲ್ಲಿ ನಡೆಯುವುದಿಲ್ಲ
Next articleಶೀಘ್ರದಲ್ಲೇ ಮತ್ತೊಂದು ಗ್ಯಾರಂಟಿ ಘೋಷಣೆ