Home ತಾಜಾ ಸುದ್ದಿ ಸ್ನೇಹಮಯಿ ಕೃಷ್ಣ ವಿರುದ್ಧ FIR

ಸ್ನೇಹಮಯಿ ಕೃಷ್ಣ ವಿರುದ್ಧ FIR

0

ಮೈಸೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿನ್ನೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ನೀಡಿದ್ದ ದೂರಿನ ಆಧಾರದ ಮೇಲೆ ಇಂದು ಎಫ್ಐಆರ್ ದಾಖಲಿಸಲಾಗಿದೆ. ಸಿಎಂ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡದ ನಿವೇಶನ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಖಂಡಿಸಿದ ಲಕ್ಷ್ಮಣ್‌ ಅವರು ಸ್ನೇಹಮಯಿ ಕೃಷ್ಣ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಸಿಎಂ ವಿರುದ್ಧ ಪ್ರತಿ ನಿತ್ಯ ಒಂದಲ್ಲೊಂದು ಆರೋಪ ಮಾಡಿ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಕ್ಷ್ಮಣ್‌ ದೂರು ನೀಡಿದ್ದರು. ದೂರು ನೀಡಿದ ಮರುದಿನವೇ ದೇವರಾಜ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Exit mobile version