Home ನಮ್ಮ ಜಿಲ್ಲೆ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರ: ಬಿಎಸ್ ವೈ

ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರ: ಬಿಎಸ್ ವೈ

0

ರಾಯಚೂರು: ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೆವೆ. ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದರು. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.
ತಾವೇ ಮುಖ್ಯಮಂತ್ರಿ ಅಂಥ ಕಾಂಗ್ರೆಸ್‌ನವರು ಓಡಾಡುತ್ತಿದ್ದಾರೆ ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತೆ. ಬಿಜೆಪಿ ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ. ಎಸ್ಸಿ, ಎಸ್ಟಿ, ಹಿಂದುಳಿದ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಮಾಡಿದ ಕೆಲಸಗಳು ಶಕ್ತಿ ತಂದುಕೊಡುತ್ತೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿವೇಶನ ಬಳಿಕ ನಾಲ್ಕು ಕಡೆಗಳಿಂದ ರಥಯಾತ್ರೆ ಆರಂಭಿಸುತ್ತೇವೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ. ಪಾರ್ಟಿ ನನಗೆ ಎಲ್ಲವನ್ನೂ ಕೊಟ್ಟಿದೆ. ಯಾವುದೇ ಕೊರತೆಯಿಲ್ಲ ನಾನು ಸಂತೃಪ್ತಿಯಾಗಿದ್ದೇನೆ. ರಾಷ್ಟ್ರ ಮಟ್ಟದಲ್ಲೂ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಯಡಿಯೂರಪ್ಪರನ್ನ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಮಾತಿಗೆ ಅರ್ಥವಿಲ್ಲ.
ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ವಿಚಾರ ಹೇಳಿಕೆ ನೀಡಿರುವುದು ಅವರಿಗೆ ಶೋಭೆ ತರುವಂಥದಲ್ಲ. ಕುಮಾರಸ್ವಾಮಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು

Exit mobile version