Home ತಾಜಾ ಸುದ್ದಿ ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ

ಹಂಸಲೇಖ ಅವರಿಂದ ಮೈಸೂರು ದಸರಾ ಉದ್ಘಾಟನೆ

0

ಮೈಸೂರು: ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ನಾದಬ್ರಹ್ಮ ಹಂಸಲೇಖ ಅವರನ್ನು ಆಯ್ಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ಘೋಷಿಸಿದರು. ನಾಡಿನ 413ನೇ ಮೈಸೂರು ದಸರಾ ಮಹೋತ್ಸವವನ್ನು ಖ್ಯಾತ ಸಾಹಿತಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ.
ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ.

Exit mobile version