Home ತಾಜಾ ಸುದ್ದಿ ಹನಿಯೊಳಗೊಂದು ಸಾಗರ: ವಿಶ್ವ ಶ್ರೇಷ್ಠ ಕನ್ನಡಿಗ

ಹನಿಯೊಳಗೊಂದು ಸಾಗರ: ವಿಶ್ವ ಶ್ರೇಷ್ಠ ಕನ್ನಡಿಗ

0

ಬೆಂಗಳೂರು: ಅಮೇರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಒಕ್ಕೂಟ “ಸಹ್ಯಾದ್ರಿ ಕನ್ನಡ ಸಂಘ” ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕ್ರಮದ ಚಿತ್ರಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿ ಭಾವನಾತ್ಮಕ ಸಂದೇಶದೊಂದಿಗೆ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಸಂದೇಶದಲ್ಲಿ ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ ಎಂದಿದ್ದಾರೆ.

Exit mobile version