Home ತಾಜಾ ಸುದ್ದಿ ಹಲವೆಡೆ IT ರೇಡ್: ಕೋಟಿ ಕೋಟಿ ಹಣ ಪತ್ತೆ

ಹಲವೆಡೆ IT ರೇಡ್: ಕೋಟಿ ಕೋಟಿ ಹಣ ಪತ್ತೆ

0

ಬೆಂಗಳೂರು: ಮಂಡ್ಯ, ಬಾಗಲಕೋಟೆ, ಹಾವೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟಿ ಕೋಟಿ ಹಣ ಪತ್ತೆಯಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉದಯ್ ಆಪ್ತ ಸುರೇಶ್ ಬಾಬು ಮನೆಯಲ್ಲಿ ಎರಡು ಕೋಟಿ ನಗದು ಹಣ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಕಾಂಗ್ರೆಸ್ ಮುಖಂಡ ರಾಜು ಬೋರಾ ಹಾಗೂ ನಗರಸಭೆ ಮಾಜಿ ಅಧ್ಯಕ್ಷ, ಉದ್ಯಮಿ ವೆಂಕಟೇಶ್ ಸಾಕಾ ಮನೆಗಳ ಮನೆಗಳ ಮೇಲೆ ದಾಳಿ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿಯ ನೆಹರೂ ನಗರದಲ್ಲಿ ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಎಂಬುವವರ ಮನೆ ಮೇಲೆ ದಾಳಿ ನಡೆದಿದೆ. ಅವರ ನಿವಾಸದಲ್ಲಿ ಸುಮಾರು 2 ಕೋಟಿ 85 ಲಕ್ಷ ರೂ. ಹಣ ಪತ್ತೆಯಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.

Exit mobile version