ಹಲ್ಲೆ ಪ್ರಕರಣ: ಆಪಾದಿತನಿಗೆ ಜೈಲು ಶಿಕ್ಷೆ

0
33
ಜೈಲು

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಲೂರ್(ಎನ್) ಗ್ರಾಮದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತನಿಗೆ ಜೈಲು ಶಿಕ್ಷೆ ವಿಧಿಸಿ ಬೀದರ್ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಶಿವಾಜಿ ವಗ್ಗೆನೋರ್ ಶಿಕ್ಷೆಗೊಳಗಾದ ಆಪಾದಿತ. ಕಳೆದ ೨೦೧೬ನೇ ಸಾಲಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಆಪಾದಿತನಿಗೆ ಭಾರತೀಯ ದಂಡ ಸಂಹಿತೆ ವಿವಿಧ ಕಲಂಗಳಡಿ ೨ ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ೩ ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕೊಡದೆ ಇದ್ದಲ್ಲಿ ೨ ತಿಂಗಳ ಶಿಕ್ಷೆ ಅನುಭವಿಸುವಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಆರ್.ಎನ್ ತೀರ್ಪು ನೀಡಿದ್ದಾರೆ ಎಂದು ಪ್ರಕರಣದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ ಶರಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಸಂಜೆ 6 ಗಂಟೆ ನಂತರವೂ ‌7 ಕಡೆ ಮತದಾನ
Next articleಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರ ಕಣ್ಮರೆ