ಹಳಿ ತಪ್ಪಿದ ರೈಲು

0
25

ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿದೆ

ಜೋಯಿಡಾ : ಕ್ಯಾಸಲ್ ರಾಕ್ ಬಳಿ ರೇಲ್ವೆ ಮಾರ್ಗದಲ್ಲಿ ರೈಲೊಂದು ಹಳಿ ತಪ್ಪಿದ ಘಟನೆ ಬೆಳಿಗ್ಗೆ ಸಂಭವಿಸಿದೆ.
ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆ ಬಳಿಯ ಜಿಂದಲ್ ಕಂಪನಿಗೆ ಕಲ್ಲಿದ್ದಲು ಕೊಂಡೊಯ್ಯುತಿದ್ದ ರೈಲು ಇದಾಗಿದೆ. ದೂದ್ ಸಾಗರ್‌ನಿಂದ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಸಮೀಪ ತೋರಣಗಲ್ ಹೊಸಪೇಟೆಯಲ್ಲಿ ವಾಸ್ಕೋದಿಂದ ಜಿಂದಾಲ್ ಕಂಪನಿಗೆ ಕಲ್ಲಿದ್ದಲು ಸಾಗಿಸುವ ಸರಕು ರೈಲು ದಬ್ಬೆಯಲ್ಲಿ ಹಳಿ ತಪ್ಪಿದೆ. ಸದ್ಯ ಈ ಮಾರ್ಗದಲ್ಲಿ ಎಲ್ಲಾ ರೈಲು ಸಂಚಾರ ಸ್ಥಗಿತ ಮಾಡಲಾಗಿದೆ.

Previous articleKPSC ಪರೀಕ್ಷೆ ದಿನಾಂಕ ಬದಲಿಸಿ
Next articleಬಾಂಗ್ಲಾದೇಶ ಬಿಕ್ಕಟ್ಟು: ಸಮಿತಿ ರಚಿಸಿದ ಕೇಂದ್ರ