ಹಾವೇರಿ: ಪಟಾಕ್ಷಿ ದಾಸ್ತಾನಿಗೆ ಬೆಂಕಿ ಹತ್ತಿದ ಘಟನೆ ಗ್ರಾಮಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಣಪತಿ ಹಬ್ಬದ ನಿಮಿತ್ತ ಪಟಾಕ್ಷಿ ದೊಡ್ಡ ಮಟ್ಟದಲ್ಲಿ ದಾಸ್ತಾನು ಮಾಡಲಾಗಿತ್ತು. ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಇದೀಗ ಏಕಾಎಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ. ಎಂಟು ಆಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸಲು ಪ್ರಯತ್ನ ಮಾಡಲಾಗಿದೆ. ಅದೃಷ್ಟವಶಾತ್ ಒಳಗಡೆ ಇದ್ದ ಸಿಲಿಂಡರ್ ತಂದಿದ್ದಕ್ಕೆ. ಯಾವುದೇ ಅವಘಡ ಸಂಭವಿಸಿಲ್ಲ.